ಚಂದ್ರಯಾನ 3: ಬೆಂಗಳೂರಿನ‌ಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ವ್ಯವಸ್ಥೆ

  • In State
  • August 23, 2023
  • 41 Views
ಚಂದ್ರಯಾನ 3: ಬೆಂಗಳೂರಿನ‌ಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ವ್ಯವಸ್ಥೆ

ಬೆಂಗಳೂರು: ಇಡೀ ದೇಶವೇ ಎದುರು ನೋಡುತ್ತಿರುವ ಇಸ್ರೋ ವಿಜ್ಞಾನಿಗಳ ಚಂದ್ರಯಾನ 3 ಲ್ಯಾಂಡಿಂಗ್ ಪ್ರಕ್ರಿಯೆ ಇಂದು ನಡೆಯಲಿದ್ದು ಈ ಕ್ಷಣಗಣನೆಗಾಗಿ ಇಡೀ ದೇಶವೇ ಎದುರು ನೋಡುತ್ತಿದೆ.

ಇನ್ನು ಚಂದ್ರನ ದಕ್ಷಿಣ ಧೃವದ ಮೇಲೆ ಚಂದ್ರಯಾಣ-3ಯ ವಿಕ್ರಮ ಲ್ಯಾಂಡರ್​​​​​​ ಸ್ಪರ್ಶಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಈ ಲ್ಯಾಂಡ್​​ ಅನ್ನು ವೀಕ್ಷಿಸಲು ಬೆಂಗಳೂರಿನ‌ ನೆಹರು ತಾರಾಲಯದಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಬೆಂಗಳೂರಿನ‌ ನೆಹರು ತಾರಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದೇವೆ. ದೊಡ್ಡ LED ಸ್ಕ್ರೀನ್​ನಲ್ಲಿ ಸಾಫ್ಟ್ ಲ್ಯಾಂಡಿಂಗ್ ಲೈವ್ ವೀಕ್ಷಿಸಬಹುದು. ಇಂದು ಸಂಜೆ 5 ಗಂಟೆ 10 ನಿಮಿಷಕ್ಕೆ ಲೈವ್ ಆರಂಭವಾಗಲಿದೆ. ಮೊದಲು ಬೆಂಗಳೂರಿನ ಬಳ್ಳಾಲದ ಇಸ್ರೋಗೆ ಮಾಹಿತಿ ಬರುತ್ತೆ. ಬಳಿಕ ವಿಜ್ಞಾನಿಗಳು ಟ್ರ್ಯಾಕಿಂಗ್ ಸೆಂಟರ್​ನಲ್ಲಿ ಮಾಹಿತಿ ಪಡೆಯುತ್ತಾರೆ.

ಬಳಿಕ ನೆಹರು ತಾರಾಲಯದಲ್ಲಿ ಲೈವ್ ಆರಂಭವಾಗುತ್ತೆ. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಕಾಯುತ್ತಿದ್ದಾರೆ ಎಂದು ನೆಹರು ತಾರಾಲಯದ ನಿರ್ದೇಶಕ ಪ್ರಮೋದ್ ಗಲಗಲಿ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos