ಬೆಂಗಳೂರು, ಜೂನ್.1, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನು ಬದಲಿಸುವಂತೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಜಟಾಪಟಿ ಆರಂಭವಾಗಿದೆ.
ವೇಣುಗೋಪಾಲ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿಯ ನಂತರ ಕಳೆದ ವಿಧಾನಸಭೆ ಹಾಗೂ ಈ ಬಾರಿಯ ಲೋಕಸಭಾ ಚುನಾವಣೆ ಎರಡರಲ್ಲೂ ಪಕ್ಷ ಸೋತಿದೆ. ವೇಣುಗೋಪಾಲ್, ಸಿದ್ದರಾಮಯ್ಯ ಆ್ಯಂಡ್ ಟೀಮ್ ಜೊತೆ ಅಡ್ಜೆಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಹುತೇಕ ಹಿರಿಯ ನಾಯಕರ ಈ ಅಭಿಪ್ರಾಯದಂತೆ ವೇಣುಗೋಪಾಲ್ ರನ್ನು ಬದಲಿಸಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಳಿ ಪಟ್ಟು ಹಿಡಿದಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಗುಲಾಂ ನಬಿ ಆಜಾದ್ ಅಥವಾ ಚಲ್ಲಕುಮಾರ್ ಯಾರನ್ನಾದರೂ ನೇಮಿಸಿ ಎಂಬ ಸಲಹೆಯನ್ನು ಕೂಡ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ.