ರಂಗೇರಿದ ಮತದಾನ

 ರಂಗೇರಿದ ಮತದಾನ

ಬೆಂಗಳೂರು, ಡಿ. 5:  ಕುರುಕ್ಷೇತ್ರವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದ್ದು, ಪಕ್ಷಗಳ ಘಟಾನುಘಟಿ ನಾಯಕರು ಸೇರಿದಂತೆ 165 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ತೀರ್ಮಾನಿಸಲಿದ್ದಾರೆ.

ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6 ವರೆಗೆ ಮತದಾನ ನಡೆಯಲಿದೆ. ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ.

ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮತದಾನ ನಡೆಯುವ ಕ್ಷೇತ್ರಗಳಲ್ಲಿ ಅರೆಸೇನಾ ಪಡೆ, ಸ್ಥಳೀಯ ಪೊಲೀಸರು, ಕ್ಷಿಪ್ರ ಕಾರ್ಯಪಡೆ ಸೇರಿದಂತೆ ವಿವಿಧ ಶ್ರೇಣಿಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯದ 15 ಕ್ಷೇತ್ರಗಳಲ್ಲಿ ಒಟ್ಟು 165 ಅಭ್ಯರ್ಥಿಗಳು ಕಣದಲ್ಲಿದ್ದು, ಇದರಲ್ಲಿ 156 ಪುರುಷರು, 9 ಮಹಿಳೆಯರು ಸ್ಪರ್ಧಿಸಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos