ನವದೆಹಲಿ, ಆ. 22 : ‘’ನಿಜವಾಗಿಯೂ ತಮ್ಮ ತಂದೆಯನ್ನು ಟಾರ್ಗೆಟ್ ಮಾಡಿಲ್ಲ. ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿಕೊಂಡು ಬಂಧಿಸಲಾಗಿದೆ. ವಿರೋಧಿಸಿ ಜಂತರ್ ಮಂಥರ್ ಬಳಿ ಪ್ರತಿಭಟನೆ ನಡೆಸುವುದಾಗಿ ಪುತ್ರ ಕಾರ್ತಿ ಚಿದಂಬರಂ ತಿಳಿಸಿದ್ದಾರೆ.
ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂರನ್ನು ರಾಜಕೀಯ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಾನೂನು ತಜ್ಞರಾದ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್, ಸಲ್ಮಾನ್ ಖುರ್ಷಿದ್ ಅವರನ್ನೊಳಗೊಂಡ ತಂಡ ಹರಸಾಹಸಪಟ್ಟರೂ ಪಿ. ಚಿದಂಬರಂ ಅವರನ್ನು ಸಿಬಿಐ ಬಂಧನದಿಂದ ತಪ್ಪಿಸಲು ಸಾಧ್ಯವಾಗಿಲ್ಲ. ಭ್ರಷ್ಟಾಚಾರ ಪ್ರಕರಣ ದಲ್ಲಿ ನಿನ್ನೆ ರಾತ್ರಿ ಬಂಧಿಸಲಾಗಿತ್ತು.