ನವದೆಹಲಿ, ನ. 27 : ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಪ್ರಭಾವಿ ಮುಖಂಡ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬೆಳಗ್ಗೆ ಭೇಟಿ ಮಾಡಿ ನೈತಿಕ ಬೆಂಬಲ ನೀಡಿದರು.
ಚಿದಂಬರಂ ಅವರ ಪುತ್ರ, ಉದ್ಯಮಿ ಮತ್ತು ಸಂಸದ ಕಾರ್ತಿ ಚಿದಂಬರಂ ಅವರೂ ಸಹ ರಾಹುಲ್ ಮತ್ತು ಪ್ರಿಯಾಂಕಾ ಜೊತೆಗಿದ್ದರು. ಐಎನ್ಎಕ್ಸ್ ಮೀಡಿಯಾ ಲಂಚ ಪ್ರಕರಣದಲ್ಲಿ ಆಗಸ್ಟ್ 24ರಂದು ಕೇಂದ್ರೀಯ ತನಿಖಾ ದಳ(ಸಿಬಿಐ) ಚಿದಂಬರಂ ಅವರನ್ನು ಬಂಧಿಸಿತು. ಅಕ್ಟೋಬರ್ 22ರಂದು ಸುಪ್ರೀಂಕೋರ್ಟ್ ಕಾಂಗ್ರೆಸ್ ನಾಯಕನಿಗೆ ಜಾಮೀನು ಮಂಜೂರು ಮಾಡಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಅಕ್ಟೋಬರ್ 16ರಂದು ಕೇಂದ್ರದ ಮಾಜಿ ಸಚಿವರನು ಬಂಧಿಸಿತು.