ಬಾಲ್ಯ ವಿವಾಹ ತಡೆಯಲು ಚುರುಕಿನ ಕಾರ್ಯ

ಬಾಲ್ಯ ವಿವಾಹ ತಡೆಯಲು ಚುರುಕಿನ ಕಾರ್ಯ

ಕೊಪ್ಪಳ, ಆ.8 : ಬಾಲ್ಯ ವಿವಾಹಕ್ಕೆ ಪ್ರೋತ್ಸಾಹಿಸಿದ ಆರೋಪಕ್ಕೆ ಸಂಬಂಧಿಸಿ, ಬಾಲಕ ಹಾಗೂ ಬಾಲಕಿಯ ಹೆತ್ತವರಿಗೆ ರಾಜ್ಯದಲ್ಲಿಯೇ ಗರಿಷ್ಠ ಪ್ರಮಾಣದ ದಂಡ ಹಾಗೂ ಶಿಕ್ಷೆ ವಿಧಿಸಿರುವ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿಯೇ ಅತಿ ಹೆಚ್ಚು ಬಾಲ್ಯ ವಿವಾಹ ನಡೆದಿರುವ ಜಿಲ್ಲೆ ಎನ್ನುವ ಕುಖ್ಯಾತಿಗೆ ಹೆಸರಾಗಿದ್ದ ಜಿಲ್ಲೆಯಲ್ಲೀಗ ಬಾಲ್ಯವಿವಾಹಗಳನ್ನು ತಡೆಗಟ್ಟುವ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಆದರೆ, ಹಿಂದೆ ನಡೆದ ಬಾಲ್ಯ ವಿವಾಹ ವಿರುದ್ಧ ಅಧಿಕಾರಿಗಳು ಹೂಡಿರುವ ಮೊಕದ್ದಮೆಗಳ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಆರೋಪ ಸಾಬೀತುಗೊಂಡು ಶಿಕ್ಷೆಗೆ ಒಳಗಾಗಿರುವ ಎರಡನೇ ಪ್ರಕರಣ ಇದಾಗಿದೆ. ಗಮನಾರ್ಹ ಸಂಗತಿಯೆಂದರೆ, ಬಾಲ್ಯ ವಿವಾಹ -2006ರಡಿ ಗರಿಷ್ಠ ಪ್ರಮಾಣದ ಶಿಕ್ಷೆ ವಿಧಿಸಿದ ಮೊದಲ ಪ್ರಕರಣವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos