ಹೆತ್ತವರ ಮಡಿಲು ಸೇರಿದ ಮಕ್ಕಳು

ಹೆತ್ತವರ ಮಡಿಲು ಸೇರಿದ ಮಕ್ಕಳು

ಧಾರವಾಡ,ಮೇ.12: ತಾಯಿ ಮತ್ತು ಮಕ್ಕಳ ಅನನ್ಯ ಪ್ರೀತಿ ಇದೆ ಎಂಬದಕ್ಕೆ ಇಲ್ಲಿನ ಮಕ್ಕಳು ರಾಜಸ್ಥಾನದ ಸಿರೋಹಿ ಜಿಲ್ಲೆಯ ಮೆಮಂಡ್ವಾರ ಗ್ರಾಮದ ಮಕ್ಕಳು ಸಾಕ್ಷಿ. ಲಾಕ್‍ಡೌನ್  ಜಾರಿಯಿಂದಾಗಿ ದೂರದ ರಾಜಸ್ಥಾನದಲ್ಲಿದ್ದ ತಮ್ಮ ಪಾಲಕರನ್ನು ಸೇರಲಾಗದೇ ಆತಂಕಕ್ಕೀಡಾಗಿದ್ದ ೧೦ ವರ್ಷದ ರೋಮುಕುಮಾರಿ, ೦೮ ವರ್ಷದ ಪೋಸುಕುಮಾರಿ ಇಬ್ಬರು ಬಾಲಕಿಯರು ಶುಕ್ರವಾರ ರಾತ್ರಿ ರಾಜಸ್ಥಾನದ ಸಿರೋಹಿ ಜಿಲ್ಲೆಯ ಮೆಮಂಡ್ವಾರ ಗ್ರಾಮದಲ್ಲಿರುವ ತಮ್ಮ ಹೆತ್ತ ತಂದೆ ತಾಯಿಗಳ ಮಡಿಲು ಸೇರಿದ್ದಾರೆ.

ಕಳೆದ ಐವತ್ತು ದಿನಗಳಿಂದ ಹೆತ್ತವರಿಂದ ಅಗಲಿದ್ದ ಈ ಮಕ್ಕಳನ್ನು ಅವರ ಪಾಲಕರೊಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್, ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ ಸೇರಿದಂತೆ ಹಲವರು ವಿಶೇಷ ಪ್ರಯತ್ನ ಮಾಡಿದ್ದರು. ಮೇ.೭ರಂದು ಜಿಲ್ಲಾಧಿಕಾರಿಗಳು ಶುಭ ಹಾರೈಸಿ ಮಕ್ಕಳನ್ನು ಬೀಳ್ಕೊಟ್ಟಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos