ಮಕ್ಕಳನ್ನ ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡ ಶಿಕ್ಷಕರು!

ಮಕ್ಕಳನ್ನ ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡ ಶಿಕ್ಷಕರು!

ಚಿಕ್ಕಬಳ್ಳಾಪುರ, ಸೆ. 9:  ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.

ಚೆನ್ನಾಗಿ ಓದಲಿ ಎಂದು ತಮ್ಮ  ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ. ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಿದ್ದಾರೆ.

ಖಾಸಗಿ ಶಾಲೆಗಳು ಮಕ್ಕಳಿಗೆ ಉತ್ತಮ ವಿದ್ಯೆ ಕಲಿಸುವ ಬದಲು ವಿದ್ಯಾರ್ಥಿಗಳಿಂದ ನಾನಾ ಕೆಲಸಗಳನ್ನು ಮಾಡಿಸುವ ಮೂಲಕ ಬಾಲ ಕಾರ್ಮಿಕರನ್ನಾಗಿಸುವ ಕೆಲಸಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos