ಚಿಂಚೋಳಿ: 10 ಜನರ ನಾಮಪತ್ರ ವಾಪಸ್.!

ಚಿಂಚೋಳಿ: 10 ಜನರ ನಾಮಪತ್ರ ವಾಪಸ್.!

ಕಲಬುರಗಿ, ಮೇ.3, ನ್ಯೂಸ್ ಎಕ್ಸ್ ಪ್ರೆಸ್: ವಿಧಾನಸಭಾ ಕ್ಷೇತ್ರ ಚಿಂಚೋಳಿ ಉಪಚುನಾವಣೆಯಲ್ಲಿ 10 ಜನರು ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

ನಾಮಪತ್ರ ವಾಪಸ್ ಪಡೆದುಕೊಳ್ಳಲು ನಿನ್ನೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ ನೋಂದಾಯಿತ ಮತ್ತು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಪಕ್ಷೇತರ 10 ಜನ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.

ಸದ್ಯ ಕಣದಲ್ಲಿ 17 ಅಭ್ಯರ್ಥಿಗಳು ಉಳಿದುಕೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಈ ಬಾರಿ ಒಟ್ಟು 27 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 10 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದದ್ದು, ಬಿಟ್ಟರೆ ಯಾವುದೇ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos