ಚಿಂಚೋಳಿ, ಕುಂದಗೋಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಚಿಂಚೋಳಿ, ಕುಂದಗೋಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕುಂದಗೋಳ, ಏ. 29, ನ್ಯೂಸ್ ಎಕ್ಸ್ ಪ್ರೆಸ್: ಮೇ. 19 ರಂದು ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.

ಚಿಂಚೋಳಿ ವಿಧಾನಸಭೆ ಕ್ಷೇತ್ರಕ್ಕೆ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಗೆ ಟಿಕೆಟ್ ನೀಡಲಾಗಿದ್ದು, ಕುಂದಗೋಳ ಕ್ಷೇತ್ರದಲ್ಲಿ ಎಸ್.ಐ. ಚಿಕ್ಕನಗೌಡ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್ ಪಕ್ಷ ಚಿಂಚೋಳಿ ಹಾಗೂ ಕುಂದಗೋಳಕ್ಕೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಚಿಂಚೋಳಿಗೆ ಖರ್ಗೆ ಆಪ್ತ ಸುಭಾಷ್ ಸಿಂಗ್ ರಾಠೋಡ ಹಾಗೂ ಕುಂದಗೋಳಕ್ಷೇತ್ರಕ್ಕೆ ಕುಸುಮಾ ಶಿವಳ್ಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಮೇ. 19 ರಂದು ಈ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಮೇ. 23 ರಂದು ಫಲಿತಾಂಶ ಪ್ರಕಟವಾಗುತ್ತದೆ.

 

ಫ್ರೆಶ್ ನ್ಯೂಸ್

Latest Posts

Featured Videos