ವರಲಕ್ಷ್ಮಿ ಹಬ್ಬದ ಅಂಗವಾಗಿ  “ಚಿತ್ತಾರ ಮೇಳ”

ವರಲಕ್ಷ್ಮಿ ಹಬ್ಬದ ಅಂಗವಾಗಿ  “ಚಿತ್ತಾರ ಮೇಳ”

ಬೆಂಗಳೂರು, ಜು. 18: ನಗರದ ಕರಕುಶಲ ವಸ್ತುಗಳ ಪ್ರೇಮಿಗಳಿಗೆ ಮತ್ತೆ ಬಂದಿದೆ ಚಿತ್ತಾರ ಮೇಳ ಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳ. ಜುಲೈ 19 ರಿಂದ ಜುಲೈ 28 ರವರೆಗೆ ಕರ್ನಾಟಕ ಚಿತ್ರಕಲಾಪರಿಷತ್‍ನಲ್ಲಿ ಈ “ಚಿತ್ತಾರ ಮೇಳ” ಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

ಈ ಚಿತ್ತಾರ ಮೇಳ ಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳದ ವಿಶೇಷವೆಂದರೆ ವರಮಹಾಲಕ್ಷ್ಮಿ ಹಬ್ಬದ ಆಚರಣೆಗೆ ಬೇಕಾದ ಎಲ್ಲಾ ರೀತಿಯ ಸಾಮಗ್ರಿಗಳು ಇಲ್ಲಿ ಲಭ್ಯವಿವೆ. ಮಣಿಪುರ, ನಾಗಾಲ್ಯಾಂಡ್ ರಾಜ್ಯದಕರಕುಶಲಕಾರರು ತಯಾರಿಸಿದ ಸೀರೆಗಳು ಈ ಬಾರಿಯ ಪ್ರಮುಖ ಆಕರ್ಷಣೆ. ಅಲ್ಲದೆ, ಸ್ಟೋನ್ ಆಭರಣಗಳು ಎಲ್ಲರ ಗಮನ ಸೆಳೆಯಲಿವೆ. ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಿಸಲು ಬೇಕಾದ ಸಾಮಗ್ರಿಗಳು ಇಲ್ಲಿಲಭ್ಯವಿವೆ.

ಹಾಗೆಯೇ, ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳುಒಂದೇ ಸೂರಿನಡಿ ದೊರೆಯುತ್ತವೆ.

ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಜುಲೈ 19 ರಿಂದ ಜುಲೈ 28 ರವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಈ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos