ಕ್ರಿಸ್​ಮಸ್ ಹಬ್ಬ: ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ!

ಕ್ರಿಸ್​ಮಸ್ ಹಬ್ಬ: ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ!

ಬೆಂಗಳೂರು: ರಾಜ್ಯದೆಲ್ಲೆಡೆ ಕ್ರಿಸ್‌ಮಸ್‌ ಹಬ್ಬ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದರಲ್ಲಿಯೂ ಸಿಲಿಕಾನ್‌ ಸಿಟಿಯಲ್ಲಿ ಎಲ್ಲಾ ಚರ್ಚ್ಗಳಲ್ಲಿ ನಿನ್ನೆ ರಾತ್ರಿಯಿಂದ ಆಚರಣೆ ಶುರುವಾಗಿದೆ. ಕ್ರಿಸ್​ಮಸ್ ಹಬ್ಬ  ಹಿನ್ನೆಲೆಯಲ್ಲಿ ನಗರದ ಚರ್ಚ್​​​ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ್ ನ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್​ಗಳ ಬಳಿ ಕೆಎಸ್​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos