ಚುಣಾವಣೆ ಸೀಟು ಹಂಚಿಕೆ: ದೇವೇಗೌಡ-ರಾಹುಲ್ ಗಾಂಧಿ ಭೇಟಿ

ಚುಣಾವಣೆ ಸೀಟು ಹಂಚಿಕೆ: ದೇವೇಗೌಡ-ರಾಹುಲ್ ಗಾಂಧಿ ಭೇಟಿ

ನವದೆಹಲಿ, ಮಾ.6, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಭೇಟಿಯಾದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ,ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನಿವಾಸದಲ್ಲಿ ಅವರನ್ನು ಭೇಟಿಯಾಗಿದ್ದು, ಉಭಯ  ನಾಯಕರೂ ಸಭೆ ನಡೆಸಲಿದ್ದಾರೆ.

ಕರ್ನಾಟಕದಲ್ಲಿ  28 ಲೋಕಸಭಾ ಕ್ಷೇತ್ರಗಳಲ್ಲಿ 12 ರಲ್ಲಿ ತಾನು ಕಣಕ್ಕಿಳಿಯುವುದಾಗಿ ಈಗಾಗಲೇ ಜೆಡಿಎಸ್ ಕಾಂಗ್ರೆಸ್ ಗೆ ಒತ್ತಾಯಿಸುತ್ತಿದೆ. ಆದರೆ ಕಾಂಗ್ರೆಸ್ ಅದಕ್ಕೆ ಗ್ರೀನ್ ಸಿಗ್ನಲ್ ನೀಡುವುದು  ಸಂಶಯವಾಗಿದೆ.

ಹಾಸನ, ಮಂಡ್ಯ, ಬೆಂಗಳೂರು ಉತ್ತರ, ಶಿವಮೊಗ್ಗ, ಮೈಸೂರು, ವಿಜಯಪುರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ,ಚಿತ್ರದುರ್ಗ, ರಾಯಚೂರು ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲು ಚಿಂತಿಸಿದೆ ಎನ್ನಲಾಗಿದೆ.

ಜೆಡಿಎಸ್ ಬೇಡಿಕೆಗೆ ಕಾಂಗ್ರೆಸ್ ಒಪ್ಪಿಗೆ ಸೂಚಿಸುತ್ತದಾ ಎಂಬುದು ಇಂದು ತಿಳಿಯಲಿದೆ. ಇದರೊಟ್ಟಿಗೆ ಮಾ.10 ರಂದು ಕಾಂಗ್ರೆಸ್ ತನ್ನೆಲ್ಲ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಸಾಧದ್ಯತೆ ಇದೆ.

ಫ್ರೆಶ್ ನ್ಯೂಸ್

Latest Posts

Featured Videos