ಫಯಾಜ್ ಸಿಐಡಿ ವಶಕ್ಕೆ

ಫಯಾಜ್ ಸಿಐಡಿ ವಶಕ್ಕೆ

ದಾರವಾಡ: ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ, ಪ್ರೀತಿಸಲು‌ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ನೇಹಾ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿರುವ ಹಂತಕ ಫಯಾಜ್ನನ್ನು ಸಿಐಡಿ ಪೊಲೀಸರು ತಮ್ಮ ವಶಕ್ಕೆ ಪಡೆಯಲಿದ್ದಾರೆ.

ಫಯಾಜ್ನನ್ನು ತಮ್ಮ ವಶಕ್ಕೆ ನೀಡುವಂತೆ ಹುಬ್ಬಳ್ಳಿಯ ಜಿಲ್ಲಾ ಸತ್ಯ ನ್ಯಾಯಾಲಯದಲ್ಲಿ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದು, ಇಂದು ನ್ಯಾಯಾಲಯದ ಆದೇಶ ಪಡೆದು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಬಂದು ಅಧಿಕಾರಿಗಳು ಫಯಾಜ್ನನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos