ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಬರ್ ನಿಷೇಧ ಹಾಗೂ ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ಮಹತ್ವದ ತಿದ್ದುಪಡಿ ವಿದೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ರಾಜ್ಯದಲ್ಲಿ ಹುಕ್ಕಾಬಾರ್‌ಗಳನ್ನು ನಿಷೇಧಿಸುವ ಮತ್ತು ಸಿಗರೇಟು ಸೇವಿಸುವ ವಯೋಮಿತಿಯನ್ನು 21ವರ್ಷಕ್ಕೆ ಹೆಚ್ಚಿಸುವ ಅಂಶವನ್ನೊಳಗೊಂಡ ‘ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿತು.
ಈ ಕುರಿತು ಸಚಿವ ದಿನೇಶ್ ಗುಂಡುರಾವ್ ಮಾಹಿತಿ ನೀಡಿದ್ದು. 2024ನೇ ಸಾಲಿನ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕರ್ನಾಟಕ ತಿದ್ದುಪಡಿ ವಿಧೇಯಕ ವಿರೋಧ ಪಕ್ಷಗಳ ಮೆಚ್ಚುಗೆ ಜೊತೆಗೆ ಅಂಗೀಕಾರಗೊಂಡಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧೇಯಕ ಕುರಿತು ವಿವರಣೆ ನೀಡಿ, ಈ ಮೊದಲು ಇದ್ದ 18 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ ಎಂಬುದನ್ನು 21 ವರ್ಷಕ್ಕೆ ಹೆಚ್ಚಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದರೆ ಒಂದು ಸಾವಿರ ರು. ದಂಡ ವಿಧಿಸಲಾಗುವುದು.
ಕರ್ನಾಟಕದಲ್ಲಿ ಸಿಗರೇಟು ನಿಷೇಧದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಶಾಲಾ ಕಾಲೇಜು ಆವರಣದಲ್ಲಿ ತಂಬಾಕು ಮಾರಾಟ ನಿಷೇಧ ಮಿತಿ 100 ಯಾಡ್ ಇದ್ದಿದ್ದನ್ನು 100 ಮೀಟರ್ ಇಂದು ಬದಲಾವಣೆ ಮಾಡಲಾಗಿದೆ.