ಬೆಂಗಳೂರು: ನಮ್ಮ ಸ್ಯಾಂಡಲ್ ವುಡ್ ನ ಸಿಂಡ್ರೆಲ್ಲಾ ಎಂದೇ ಫೇಮಸ್ ಆದಂತಹ ನಟಿ ರಾಧಿಕಾ ಪಂಡಿತ್ ಅವರು ನಟ ಯಶ್ ರವರನ್ನು ಮದುವೆಯಾಗಿ ನಟನೆಯಿಂದ ದೂರ ಉಳಿದಿದ್ದಾರೆ ಹಾಗೂ ಅವರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆಕ್ವೀವ್ ಆಗಿರುತ್ತಾರೆ.
ಸ್ಯಾಂಡಲ್‌ವುಡ್ ನಟಿ ರಾಧಿಕಾ ಪಂಡಿತ್ ಇನ್ನೇನು ಪ್ರೇಮಿಗಳ ಸಂಭ್ರಮಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಕೂಡ ಹೊಸ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಸದ್ಯ ವ್ಯಾಲೆಂಟಥನ್ಸ್ ಡೇ ಮೂಡ್‌ನಲ್ಲಿ ಚಂದನವನದ ಸಿಂಡ್ರೆಲ್ಲಾ ರಾಧಿಕಾ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದಾರೆ.
ನಟಿ ರಾಧಿಕಾ ಪಂಡಿತ್, ಕಡು ಕೆಂಪು ಬಣ್ಣದ ಗೌನ್ ತೊಟ್ಟು, ಮಿಣ ಮಿಣ ಅಂತ ಮಿನುಗುವ ಲೈಟ್‌ಗಳ ಮಧ್ಯೆ ಥೇಟ್ ಸಿಂಡ್ರೆಲ್ಲಾರಂತೆ ಕ್ಯಾಮರಾಗೆ ಪೋಸ್ ಕೊಟ್ಟಿದ್ದಾರೆ. ಈ ನಟಿ ಬ್ಯಾಕ್‌ಗ್ರೌಂಡ್‌ನಲ್ಲಿ ಮೂರು ಫೋಟೊಗಳನ್ನು ಹಂಚಿಕೊಂಡಿದ್ದು, ಇದಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ರಾಧಿಕಾ ಪಂಡಿತ್ ಪ್ರೇಮಿಗಳ ವಾರದಲ್ಲಿ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಕುತೂಹಲ ವ್ಯಕ್ತಪಡಿಸಿದ್ದಾರೆ. ಜೊತೆ ಯಶ್ ಫ್ಯಾನ್ಸ್ ಕೂಡ ಕಮೆಂಟ್ ಮೇಲೆ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ.