ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಹಾಸನ, ಡಿ. 19 : ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ನಿಷೇಧಾಜ್ಞೆ ನಡುವೆಯೂ ವಿವಿಧ ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಹೇಮಾವತಿ ಪ್ರತಿಮೆ ಎದುರು ಜಮಾಯಿಸಿದ ಐನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಕೇಂದ್ರ ಸರ್ಕಾರ ಹಗೆತನ ಸಾಧಿಸುತ್ತಿದೆ ಎಂದು ಆರೋಪಿಸಿದರು.ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆಗೆ ಉತ್ತಮ ಬೆಂಬಲ ದೊರೆಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದೆ. ಎಲ್ಲ ಪ್ರತಿಭಟನಾಕರರನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ನಿವಾಸ್ ಸೆಪಟ್, ಎಎಸ್ಪಿ ಡಾ. ಬಿ.ಎನ್. ನಂದಿನಿ, ತಹಸೀಲ್ದಾರ್ ಜಿ. ಮೇಘನಾ ಸ್ಥಳದಲ್ಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos