ಆ.23ರಿಂದ ತರಗತಿಗಳು ಪುನರಾರಂಭ

  • In State
  • August 6, 2021
  • 131 Views
ಆ.23ರಿಂದ ತರಗತಿಗಳು ಪುನರಾರಂಭ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ 9-10, ಪಿಯುಸಿ ತರಗತಿಗಳನ್ನು ಆ. 23 ರಿಂದ ಪ್ರಾರಂಭಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ತಜ್ಞರೊಂದಿಗೆ ವಿಸ್ತೃತವಾಗಿ ಚರ್ಚಿಸಿದರು. ರಾಜ್ಯದ ಕೋವಿಡ್ ಸ್ಥಿತಿಗತಿಯನ್ನು ಆಧರಿಸಿ ತಿಂಗಳ ಅಂತ್ಯದಲ್ಲಿ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಿದ್ದು, ಪ್ರಾರಂಭಿಸುವ ಮುನ್ನ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಸೂಚನೆ ಹೊರಡಿಸಲಾಗುವುದು ಎಂದು ಮಾಧ್ಯಮಕ್ಕೆ ತಿಳಿಸಿದರು. ಕೇರಳ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಲಾಗಿದ್ದು, ರಾತ್ರಿ 10ರ ಬದಲು 9ರಿಂದ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ತಿಳಿಸಿದರು.
ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಡಾ. ಕೆ. ಸುಧಾಕರ್, ತಜ್ಞರಾದ ಡಾ. ಸಿ.ಎನ್. ಮಂಜುನಾಥ್, ಡಾ. ದೇವಿಪ್ರಸಾದ್ ಶೆಟ್ಟಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಇನ್ನಿತರರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos