ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ದೇವನಹಳ್ಳಿ, ಆ. 31: ಮಕ್ಕಳಲ್ಲಿರುವ ಪ್ರತಿಭೆಗಳು ನಾಲ್ಕು ಗೋಡೆಯ ಮಧ್ಯೆ ಸೀಮಿತವಾಗದೆ ಕ್ಲಸ್ಟರ್ ಹಂತದಲ್ಲಿ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಎಲ್ಲಾ ಶಾಲಾ ಮಕ್ಕಳು ತಮ್ಮದೇ ಆದ ಪ್ರತಿಭೆಗಳನ್ನು  ಹೊರಹಾಕುವುದು ಇದೊಂದು ಅವಕಾಶವಾಗಿದೆ ಎಂದು ಗ್ರಾಪಂ ಅಧ್ಯಕ್ಷ ಮಂಜುಳಾ ಮಂಜುನಾಥ್ ಹೇಳಿದರು.

ತಾಲೂಕಿನ ಚನ್ನರಾಯಪಟ್ಟಣ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಕ್ಕಳಿಗೆ ಪಠ್ಯೇತರ ಜೊತೆಗೆ ಚಟುವಟಿಕೆ ಕಾರ್ಯಕ್ರಮಗಳನ್ನು ರೂಪಿಸಿದೆ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳು ಆಯೋಜಿಸಿ ಶಾಲೆಯ ಎಲ್ಲಾ ಮಕ್ಕಳಲ್ಲಿ ಒಂದೊಂದು ರೀತಯ ಕಲೆಯಿದೆ, ಇದನ್ನು ಪ್ರದರ್ಶಿಸಲು ಶಾಲಾ ಮಕ್ಕಳ ಜೊತೆಗೆ ಪ್ರದರ್ಶಿಸಬಹದು ಇದರಿಂದ ಮಕ್ಕಳಲ್ಲಿರುವ ಅಂಜಿಕೆ ದೂರವಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಭಾಷೆ ಶಿಕ್ಷಕರನ್ನು ನೇಮಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಎಂದು ಹೇಳಿದರು.

ಮಕ್ಕಳ ದಾಖಲಾತಿಯು ಹೆಚ್ಚಾಗುತ್ತದೆ. ಖಾಸಗಿ ಶಾಲೆಯಲ್ಲಿ ಕೇವಲ ಫಲಿತಾಂಶಕಷ್ಟೇ ಸೀಮಿತವಾಗಿವೆ. ಸರ್ಕಾರಿ ಶಾಲೆಗಳಲ್ಲಿ ಕ್ರೀಡೆ, ನಲಿಕಲಿ, ಪ್ರತಿಭಾ ಕಾರಂಜಿ, ಇಂತಹ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಪೋಷಕರು ಸರ್ಕಾರಿ ಶಾಲಾ ಮಕ್ಕಳನ್ನು ದಾಖಲಿಸಬೇಕು ಹಾಗೂಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ತಾಪಂ ಸದಸ್ಯ ವೆಂಕಟೇಶ್ ಮಾತನಾಡಿ, ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ತಾಲೂಕಿನಲ್ಲಿರುವ ಎಲ್ಲಾ ಸರಕಾರಿ ಶಾಲೆಯ ಮಕ್ಕಳು ಅತ್ಯುತ್ತಮವಾಗಿ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕ್ಲಸ್ಟರ್ ಮಟ್ಟದಲ್ಲಿ ಉತ್ತಮವಾಗಿ ವೇದಿಕೆ ನಿರ್ಮಾಣ ಮಾಡಿದ್ದು, ಮಕ್ಕಳಿಗೆ ಇದೊಂದು ಹಬ್ಬದಂತೆ ಕಾಣಿಸುತ್ತಿದೆ. ಶೈಕ್ಷಣಿಕವಾಗಿ ಮಕ್ಕಳು ಮುಂಬರಲು ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವಂತೆ ಆಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ, ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್, ಗ್ರಾಪಂ ಸದಸ್ಯ ನಾರಾಯಣಸ್ವಾಮಿ, ಮುನಿವೀರಮ್ಮ, ವಿಎಸ್‌ಎಸ್‌ಎನ್ ಅಧ್ಯಕ್ಷ ಬಾಬು, ಎಂಪಿಸಿಎಸ್ ಅಧ್ಯಕ್ಷ ಉಮೇಶ್, ಶಿಕ್ಷರ ಸಂಘದ ಜಂಟಿ ಕಾರ್ಯದರ್ಶಿ ಗೋವಿಂದರಾಜ್, ಗ್ರಾಮದ ಮುಖಂಡರಾದ ಸೋಮಶೇಖರ್, ಶಿವಕುಮಾರ್, ಸಿಅರ್‌ಪಿ ಶ್ರಿÃನಾಥ್, ಮುಖ್ಯ ಶಿಕ್ಷಕ ನಾರಾಯಣಸ್ವಾಮಿ, ಕೃಷಿಕ ಸಮಾಜದ ನಿರ್ದೇಶಕ ಮಂಜುನಾಥ್ ಇದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos