ಕ್ಯಾನ್ಸರ್‌ ಆಸ್ಪತ್ರೆಯ ಶಂಕು ಸ್ಥಾಪನೆ ಮಾಡಿದ ಸಿಎಂ!

ಕ್ಯಾನ್ಸರ್‌ ಆಸ್ಪತ್ರೆಯ ಶಂಕು ಸ್ಥಾಪನೆ ಮಾಡಿದ ಸಿಎಂ!

ಮೈಸೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಕಷ್ಟ ಕರವಾಗಿದೆ. ಅದರಲ್ಲಲಿಯೂ ಇಡೀ ದೇಶದಲ್ಲಿ ಕ್ಯಾನ್ಸರ್‌ ಕಾಯಿಯೆ ಹೆಚ್ಚಾಗುತ್ತಾಯಿದೆ. ಅದಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಕ್ಯಾನ್ಸರ್‌ ಆಸ್ಪತ್ರೆಯ ಶಂಕು ಸ್ಥಾಪನೆ ಮಾಡಿದರು.  ಬರೊಬ್ಬರಿ 49 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೈಸೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಶಂಕುಸ್ಥಾಪನೆ ಇಂದು ನೆರವೇರಿದೆ.

ಈ ವೇಳೆ ಸಿಎಂ ಸಿದ್ದರಾಮಯ್ಯನವರು ಕಳಸದ ಬಳಿ ಶೂ ಧರಿಸಿಯೇ ಭೂಮಿ ಪೂಜೆ ಮಾಡಿದ್ದಾರೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ಕೂಡ ಶೂ ಧರಿಸಿಯೇ ಭೂಮಿ ಪೂಜೆ ನೆರವೇರಿಸಿದರು. ಇದು 350 ಹಾಸಿಗೆ ಸಾಮರ್ಥ್ಯವುಳ್ಳ ಕ್ಯಾನ್ಸರ್ ಆಸ್ಪತ್ರೆ ಆಗಿದೆ. ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ಕೆ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ರವಿಶಂಕರ್, ವಿಧಾನಪರಿಷತ್ ಸದಸ್ಯರಾದ ಡಾ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಮರಿತಿಬ್ಬೆಗೌಡ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ. ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಡೀನ್ ಡಾ.ಅಶೋಕ್, ಮೈಸೂರು ಮೆಡಿಕಲ್ ಕಾಲೇಜು ಡೀನ್ ಡಾ ದಾಕ್ಷಾಯಿಣಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos