ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯ ಸಿಎಂ ಸೂಚನೆ!

ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯ ಸಿಎಂ ಸೂಚನೆ!

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಕುವಂತೆ ಸಿಎಂ ಸಿದ್ದರಾಮಯ್ಯಇಂದು ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ ಎಂದು ನಮೂದಿಸಲು ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದರು.

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯಗೊಳಿಸಲಾಗಿತ್ತು ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬುದಾಗಿ ಅದರಲ್ಲಿ ಬರೆದು ಹಾಕುವಂತೆ ಸಿಎಂ ಸಿದ್ದರಾಮಯ್ಯನವರು ಆದೇಶವನ್ನು ಹೊರಡಿಸಿದ್ದಾರೆ.

ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು ಜಗಜ್ಯೋತಿ ಬಸವೇಶ್ವರ ಎಂದು ಪ್ರಖ್ಯಾತರಾಗಿರುವ ಬಸವಣ್ಣರವರು 12ನೇ ಶತಮಾನದ ವಚನ ಚಳುವಳಿಯ ಹಾಗೂ ಸಾಮಾಜಿಕ ನ್ಯಾಯದ ನಾಯಕತ್ವ ವಹಿಸಿದ್ದರು ಮನು ಧರ್ಮಶಾಸ್ತ್ರವು ಶ್ರೇಣಿಕೃತ ಸಮಾಜವನ್ನು ನಿರ್ಮಾಣ ಮಾಡಿ ಅಸಮಾನತೆಯನ್ನು ಸೃಷ್ಟಿ ಮಾಡಿತ್ತು.

ಹುಟ್ಟಿನ ಆದಾಗ ಮೇಲೆ ಮೇಲು-ಕೀಲು ಎಂದು ಸಮುದಾಯಗಳನ್ನು ಶಾಶ್ವತವಾಗಿ ವಿಭಜಿಸಿ ಕತ್ತಲ ಕೋಪಕ್ಕೆ ತಳ್ಳಲಾಗಿ ದುಡಿಯುವ ವರ್ಗಗಳು ಕ್ರಿಯಾಶೀಲ ಸಮಾಜಗಳ ಸೃಜನಶೀಲ ಶಕ್ತಿಗಳಾಗಿರುತ್ತವೆ ಆದರೆ ಜಾತಿಯ ಹೆಸರಿನಲ್ಲಿ ಈ ಸಮುದಾಯಗಳ ಚೈತನ್ಯವನ್ನು ಕಿತ್ತುಕೊಳ್ಳಲಾಗಿದ್ದು ಎಂದಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos