ನಿಮಗೆ ಡಿಕೆ ಸುರೇಶ್ ಬೇಕೇ ಇಲ್ಲಾ ಡಾಕ್ಟರ್ ಬೇಕಾ: ಸಿಎಂ

ನಿಮಗೆ ಡಿಕೆ ಸುರೇಶ್ ಬೇಕೇ ಇಲ್ಲಾ ಡಾಕ್ಟರ್ ಬೇಕಾ: ಸಿಎಂ

ಬೆಂಗಳೂರು: ಈ ಬಾರಿ ಲೋಕಸಭೆ ಚುಣಾವಣೆ ರಾಜ್ಯದಲ್ಲಿ ರಂಗೇರಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ ಕೆ ಸುರೇಶ್‌ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗೇ ಬಿಜೆಪಿ- ಜೆಡಿಸ್‌ ಅಭ್ಯರ್ತಿಯಾಗಿ ಡಾ ಸಿಎನ್‌ ಮಂಜುನಾಥ್‌ ಕಂಕಿಳಿದ್ದಾರೆ. ಆದರಿಂದ ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜಿದ್ದಾಜಿದ್ದೆಗೆ ಕಾರಣವಾಗಿದೆ.

ಜನರ ಮಧ್ಯೆ ಇರುವ ಕ್ರಿಯಾಶೀಲ ರಾಜಕಾರಣಿ ಡಿ.ಕೆ.ಸುರೇಶ್ ಬೇಕೆ ಹೊರತು ವೈಟ್ ಕಾಲರ್ ರಾಜಕಾರಣಿ ಡಾ.ಸಿ.ಎನ್. ಮಂಜುನಾಥ್ ಬೇಡ ಎಂಬುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನನಗೆ ಪ್ರತಿನಿತ್ಯ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಡಿ.ಕೆ.ಸುರೇಶ್ ಅವರು ಗೆಲವು ಸಾಧಿಸುವುದು ಶತಸಿದ್ದ. ಸಂಸದರಾದರು ಡಿ.ಕೆ.ಸುರೇಶ್ ಪಂಚಾಯಿತಿ ಸದಸ್ಯನಂತೆ ಜನ ಸಂಪರ್ಕ ಸಾಧಿಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ದುಡಿಯುವ ಆ ವ್ಯಕ್ತಿಯನ್ನು ಪ್ರತಿನಿಧಿಯಾಗಿ ದೆಹಲಿಗೆ ಕಳುಹಿಸಿದರೆ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು. ಈ ಕ್ಷೇತ್ರದಲ್ಲಿ ಬಿಜೆಪಿಯವರಿಗೆ ಅಭ್ಯರ್ಥಿ ಸಿಗಲಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಅಂತ ಡಾ.ಸಿ.ಎನ್. ಮಂಜುನಾಥ್ ಅವರನ್ನು ಕರೆತಂದು ನಿಲ್ಲಿಸಿದ್ದಾರೆ.

ಅವರು ಸರ್ಕಾರಿ ನೌಕರಿಯಲ್ಲಿದ್ದರೆ ಹೊರತು ರಾಜಕಾರಣದಲ್ಲಿ ಇರಲಿಲ್ಲ. ಎಂದಾದರು ಜನರ ಸೇವೆ ಮಾಡಿದ್ದಾರಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ರಾಜಕಾರಣಿ ಮಂಜುನಾಥ್ ಬೇಕೊ ಎಂಬುದನ್ನು ಜನರು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos