ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಮೈಸೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ

ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಮೈಸೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ

ಮೈಸೂರು: ಲೋಕಸಭಾ ಚುನಾವಣೆ ರಾಜ್ಯದೆಲ್ಲದೇ ಬಿಸಿ ಹೆಚ್ಚಾಗಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಒಡೆಯರ್ ಅವರು ಅಖಾಡಕ್ಕೆ ಇಳಿದಿದ್ದಾರೆ ಹಾಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ರವರು ನಿಂತಿದ್ದಾರೆ.

ತವರು ಜಿಲ್ಲೆಯನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ಕಾಲ ಮೈಸೂರು ಜಿಲ್ಲೆಯ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.

ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಗೆಲ್ಲಲೇಬೇಕೆಂಬ ಪ್ಲಾನ್ ಹಾಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳೆದ ವಾರ ಮೈಸೂರಿನಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಿದ್ದರು. ಹೆಚ್​. ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಇರುವ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದರು.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರ ಸಭೆ ನಡೆಸಿ, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳನ್ನ ಪ್ರಚಾರ ಮಾಡಿ, ಕ್ಷೇತ್ರಗಳಲ್ಲಿ ಕಾಂಗ್ರೆಸ್​ಗೆ ಹೆಚ್ಚು ಮತ ಬರುವ ರೀತಿ ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆ ನಡೆಸಿದ್ದರು.

ಬಳಿಕ ಮೈಸೂರು ನಗರದಲ್ಲಿ ಪ್ರಮುಖ ಬಿಜೆಪಿ ನಾಯಕರುಗಳನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದರು.

ಸೋಮವಾರದಿಂದ ಮೂರು ದಿನ ತವರು ಜಿಲ್ಲೆಯಲ್ಲಿ ಸಿಎಂ ಚುನಾವಣಾ ಪ್ರಚಾರ : ಹೇಗಾದರೂ ಮಾಡಿ ತವರು ಜಿಲ್ಲೆಯಲ್ಲಿ ಕಾಂಗ್ರೆಸ್​ನ ಗೆಲ್ಲಿಸಲೇಬೇಕೆಂಬ ಉದ್ದೇಶದಿಂದ ಸ್ವತಃ ಮುಖ್ಯಮಂತ್ರಿ ಅವರು ಸೋಮವಾರ, ಮಂಗಳವಾರ, ಹಾಗೂ ಬುಧವಾರ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಇಂದು ತಮ್ಮ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಹಾಗೂ ತಿ. ನರಸೀಪುರ ಕ್ಷೇತ್ರದಲ್ಲಿ ಚುನಾವಣಾ ಸಭೆ ನಡೆಸಲಿದ್ದಾರೆ. ಈ ಪ್ರದೇಶಗಳು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರಲಿವೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಡಾ. ಹೆಚ್​. ಸಿ. ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಬಳಿಕ ಸೋಮವಾರ ಸಂಜೆ ಬಿಷಪ್ ನಿವಾಸಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos