ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು 50 ಕೋಟಿ ರೂ ಆಫರ್: ಸಿಎಂ

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು 50 ಕೋಟಿ ರೂ ಆಫರ್: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಬಿಸಿ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಕಣಕ್ಕಿಳಿಯುತ್ತಿರುತ್ತಾರೆ ರಾಜ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿರುವುದರಿಂದ ಹಲವಾರು ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಯು ಆಪರೇಶನ್ ಕಮಲಕ್ಕೆ ಮುಂದಾಗಿದ್ದು, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಫರ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ.

“ಅವರು ಕಳೆದ ಒಂದು ವರ್ಷದಿಂದ ನನ್ನ ಸರ್ಕಾರ ಮುರಿಯಲು ಪ್ರಯತ್ನಿಸುತ್ತಿದ್ದಾರೆ. 50 ಕೋಟಿ ರೂ ಅವರು ನಮ್ಮ ಶಾಸಕರಿಗೆ ಆಫರ್ ಮಾಡಿದ್ದಾರೆ. ಅವರು ಪ್ರಯತ್ನಪಟ್ಟಿದ್ದಾರೆ, ಆದರೆ ವಿಫಲರಾಗಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಒಂದು ವೇಳೆ ಸೋತರೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗುವುದು ಸುಲಭವೇ ಎಂಬ ಪ್ರಶ್ನೆಗೆ ಸಿದ್ದರಾಮಯ್ಯನವರು, “ಇಲ್ಲ ಸಾಧ್ಯವಿಲ್ಲ,

ನಮ್ಮ ಶಾಸಕರು ಪಕ್ಷ ತೊರೆಯುವುದಿಲ್ಲ. ಒಬ್ಬನೇ ಒಬ್ಬ ಶಾಸಕ ಪಕ್ಷ ತೊರೆದು ಹೋಗುವುದಿಲ್ಲ” ಎಂದರು. ತನ್ನ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos