ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರ: ಸಿಎಂ

ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರ: ಸಿಎಂ

ಬೆಂಗಳೂರು: ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರೀತಿಸಲು‌ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.

ನೇಹಾ ಹಿರೇಮಠ್ ಪ್ರಕರಣ ಕ್ಷಣಕೊಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಆರೋಪಿಗೆ ಸೂಕ್ತ ಶಿಕ್ಷೆಯಾಗಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಬಗ್ಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಇಂದು ಬಿಜೆಪಿಯು ಕೂಡ ಪ್ರತಿಭಟನೆಗೆ ಇಳಿದಿದೆ. ಅಲ್ಲದೆ ಹಲವು ಸಂಘಟನೆಗಳು ಕೂಡ ಸೂಕ್ತ ಕ್ರಮ ಆಗುವಂತೆ ಒತ್ತಾಯಿಸಿವೆ. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos