ಗ್ಯಾರೆಂಟಿಯಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆಯಾ? ಬಿಜೆಪಿ ಸುಳ್ಳು ಹೇಳ್ತಾರೆ: ಸಿಎಂ

ಗ್ಯಾರೆಂಟಿಯಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆಯಾ? ಬಿಜೆಪಿ ಸುಳ್ಳು ಹೇಳ್ತಾರೆ: ಸಿಎಂ

ಕಲಬುರಗಿ: ಲೋಕಸಭಾ ಚುನಾವಣೆಗೆ ಇನ್ನೊಂದು ದಿನ ಬಾಕಿ ಉಳಿದ್ದಿದು, ರಾಜ್ಯದೆಲ್ಲಡೆ ಅಭ್ಯರ್ಥಿಗಳ ಪರಗಳು ಭರ್ಜರಿ ಪ್ರಚಾರ ಮಾಡಿದ್ದಾರೆ. ನಿನ್ನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರ ಪರ ಬೃಹತ್ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.

ಪ್ರತೀ ವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಮೋದಿ ಹೇಳಿದ್ದರು. ಉದ್ಯೋಗಗಳು ಎಲ್ಲಿ ಹೋದವು? ಹದಿನೈದು ಲಕ್ಷ ರೂ ನೀಡುವುದಾಗಿ ಹೇಳಿದ್ದರು. ಆ ಹಣ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು. ಗ್ಯಾರಂಟಿ ಯೋಜನೆ ಜಾರಿಗೆ ತಂದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಮೋದಿ ಹೇಳಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆಯನ್ನು ಜಾರಿಗೆ ತಂದಿದ್ದೇನೆ. ನಮ್ಮ ಸರ್ಕಾರ ದಿವಾಳಿಯಾಗಿದೆಯೇ? ಮೋದಿ ಸುಳ್ಳು ಹೇಳುತ್ತಾರೆ.

ಬಿಜೆಪಿ ಸುಳ್ಳಿನ ಕಾರ್ಖಾನೆ. ಸುಳ್ಳು ಇವರ ಮನೆ ದೇವರು. ಲೋಕಸಭಾ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ನಾವು ಬಸವಣ್ಣನವರ ಅನುಯಾಯಿಗಳು. ಕೊಟ್ಟ ಮಾತು ಮೀರುವುದಿಲ್ಲ ಎಂದು ಭರವಸೆ ನೀಡಿದರು.
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ರಾಧಾಕೃಷ್ಣ ದೊಡ್ಮನಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ, ಸಂಸತ್ತಿನಲ್ಲಿ ರಾಜ್ಯ ಸರ್ಕಾರದ ಪರ ಧ್ವನಿ ಎತ್ತದ ಉಮೇಶ ಜಾಧವ್ ಯಾಕೆ ಗೆಲ್ಲಬೇಕು ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos