ಮಾಜಿ ಸಿಎಂ ಸಚಿವ ಸ್ಥಾನದ ಬೇಡಿಕೆ!?

ಮಾಜಿ ಸಿಎಂ ಸಚಿವ ಸ್ಥಾನದ ಬೇಡಿಕೆ!?

ಬೆಂಗಳೂರು, ಆ. 1: ರಾಜ್ಯದ ಸರ್ಕಾರದಲ್ಲಿ ಇತ್ತಿಚಿಗಷ್ಟೆ ಬಿಜೆಪಿ ಸರ್ಕಾರವು ಅಸ್ತಿತ್ವಕ್ಕೆ ಬಂದು ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅದಾಗಲೇ ಯಡಿಯೂರಪ್ಪನವರ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ.

ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ಈಗಾಗಲೇ ಲಾಬಿ ಪ್ರಾರಂಭವಾಗಿದ್ದು  ಇದೀಗ ಮಂತ್ರಿ ಸ್ಥಾನಕ್ಕಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮಂತ್ರಿ ಸ್ಥಾನದ ಬೇಡಿಕೆ ಇಟ್ಟಿದ್ದು, ಬಿಜೆಪಿ ಪಾಳಯದಲ್ಲಿ ಸಾಕಷ್ಟು ಚರ್ಚೆಗಳು ಪ್ರಾರಂಭವಾಗಿವೆ. ನನಗೆ ಸಚಿವ ಸ್ಥಾನ ಬೇಕೆ ಬೇಕು ಎಂದು ಜಗದೀಶ್ ಶೆಟ್ಟರ್ ಹಠ ಹಿಡಿದು ಕುಳಿತಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರ ಮುಂದೆ ಜಗದೀಶ್ ಶೆಟ್ಟರ್ ಅವರು ಸಚಿವ ಸ್ಥಾನದ ಡಿಮ್ಯಾಂಡ್ ಇಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಥವಾ ಕಂದಾಯ ಇಲಾಖೆ ನೀಡುವಂತೆ ಜಗದೀಶ್ ಶೆಟ್ಟರ್  ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿ ಹೈಕಮಾಂಡ್ ಗೆ ನೀಡುವ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರನ್ನು ಸೇರಿಸಲು ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಇಷ್ಟು ದಿನ ದೋಸ್ತಿಗಳ ಕಿತ್ತಾಟ ನೋಡಿದ್ದಾಯ್ತು . ಇದೀಗ ಬಿಜೆಪಿಯಲ್ಲಿ ಕಿತ್ತಾಟ ಶುರುವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos