ಮುಜಾಫರ್‌ನಗರ, ಜೂನ್. 13: ಉತ್ತರ ಪ್ರದೇಶದಲ್ಲಿ ಇತ್ತೀಚಿನ ವಾರಗಳಲ್ಲಿ ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗ್ರಾಮಾಂತರ ಪ್ರದೇಶಗಳಲ್ಲಿ ಗಸ್ತು ತಿರುಗುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದ್ದಾರೆ. ತಾಯಿಯನ್ನು ಹುಡುಕಿಕೊಂಡು ಬರಲು ಹೋದ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ. ಕಬ್ಬಿನ ಗದ್ದೆಯಲ್ಲಿದ್ದ ತನ್ನ ತಾಯಿಯನ್ನು ನೋಡಲು ತೆರಳುತ್ತಿದ್ದಾಗ ಕಾಸೇರ್ವ ಗ್ರಾಮದಲ್ಲಿ ನಾಲ್ವರು ಕಾಮುಕರು 13 ಮತ್ತು 15 ವರ್ಷದ ಸೋದರಿಯರನ್ನು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸೂಪರಿಂಟೆಂಡೆಂಟ್ ಅಲೋಕ್ ಶರ್ಮಾ ತಿಳಿಸಿದ್ದಾರೆ.
ಬಾಲಕಿಯರು ಸಹಾಯಕ್ಕಾಗಿ ಅತ್ತರೆ ಅಥವಾ ಯಾರಿಗಾದರೂ ಘಟನೆ ಕುರಿತು ಹೇಳಿದರೆ ಶೂಟ್ ಮಾಡುವುದಾಗಿ ಬೆದರಿಕೆವೊಡ್ಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.