ಸಿ.ಎಂ ಹಾಗೂ ಡಿಸಿಎಂ ಇಂದು ಸಾಂಸ್ಕೃತಿ ನಗರಕ್ಕೆ ಭೇಟಿ

ಸಿ.ಎಂ ಹಾಗೂ ಡಿಸಿಎಂ ಇಂದು ಸಾಂಸ್ಕೃತಿ ನಗರಕ್ಕೆ ಭೇಟಿ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ಪೂರೈಸಿದ ಸಂಭ್ರಮ ಮತ್ತು ಗೃಹಲಕ್ಷ್ಮಿ ಯೋಜನೆಗೆ ಇದೆ ಆಗಸ್ಟ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿನಲ್ಲಿ ಚಾಲನೆ ನೀಡಲು ಎಲ್ಲಾ ರೀತಿಯ ಸಿದ್ಧತೆಗಳು ಬರದಿಂದ ನಡೆಯುತ್ತಿವೆ.

ಈ ಎರಡೂ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರ ಒಟ್ಟಿಗೆ ನಡೆಸಲು ಪೂರ್ವಭಾವಿ ಸಿದ್ಧತೆ ನಡೆಸಿದ್ದು, ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯುವ ಈ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ತಯಾರಿ ಸಂಬಂಧ ಸಿ.ಎಂ. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಮೂರು ದಿನ ಸಾಂಸ್ಕೃತಿಕ ನಗರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದಲ್ಲಿರುವ ಕಣ್ಣಿನ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಸಂಜೆ ಏಳು ಗಂಟೆಗೆ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾಯಂಕಾಲ 4.30ಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡ ಮೈಸೂರಿಗೆ ಬರಲಿದ್ದಾರೆ. ಇಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದ ರೂಪು ರೇಷುಗಳ ಕುರಿತು ಶಾಸಕರು ಮತ್ತು ಸಚಿವರ ಜೊತೆ ಸಭೆ ನಡೆಸಲಿದ್ದಾರೆ.
ವರದಿಗಾರ
ಎ.ಚಿದಾನಂದ

ಫ್ರೆಶ್ ನ್ಯೂಸ್

Latest Posts

Featured Videos