ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ

ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಕಾಂಗ್ರೆಸ್ ಪಕ್ಷದವರು ಚಾಮುಂಡೇಶ್ವರಿ ತಾಯಿಗೆ ಹರಕೆಯನ್ನು ಮಾಡಿಕೊಂಡಿದ್ದರು. ನಾಳೆ ಗೃಹಲಕ್ಷ್ಮಿ ಯೋಜನೆ ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಪಕ್ಷ ಮೈಸೂರಿಗೆ ತೆರಳಿದೆ. ವಿಧಾನಸಭಾ ಚುನಾವಣೆ ಕಾಂಗ್ರೆಸ್ ಬೇಡಿಕೊಂಡಿದ್ದ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಅದರಿಂದ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಹರಕೆಯನ್ನು ತೀರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸೇರಿ ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ತೀರಿಸಿದರು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಅವರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಹರಕೆ ತೀರಿಸಿದ್ದಾರೆ. ಅಲ್ಲದೇ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಮೊದಲ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿಯನ್ನು ಕಾಣಿಕೆ ಸಂದಾಯ ಮಾಡಿದರು. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಅವರು ತಲಾ 2 ಸಾವಿರ ರೂ. ಕಾಣಿಕೆ ಹಾಕಿದರು.
ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಚಾಮುಂಡೇಶ್ವರಿ ದೇವಿ ಮುಂದೆ ಗ್ಯಾರಂಟಿ ಕಾರ್ಡ್ ಇಟ್ಟು ಬೇಡಿಕೊಂಡಿದ್ದೆವು. ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಶಕ್ತಿ ಕೊಡುವಂತೆ ಬೇಡಿಕೊಂಡಿದ್ದೆವು. ನಾಳೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೇವೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos