ಸಿಎಂ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ

ಸಿಎಂ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ. 3: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ?.  ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ? ಎಂದು ಮುಖ್ಯಮಂತ್ರಗಳಾದ ಯಡಿಯುರಪ್ಪನವರಿಗೆ ಮಾಜಿ  ಸಿಎಂ ಸಿದ್ದರಾಮಯ್ಯ ನವರು ಟ್ವೀಟ್  ಮೂಲಕ ಕಾಲೆಳೆದಿದ್ದಾರೆ.

ಸಿಎಂ ಜೊತೆಗೆ ರಾಜ್ಯಪಾಲರಿಗೂ ಬಿಸಿ ಮುಟ್ಟಿಸಿದ ಸಿದ್ದರಾಮಯ್ಯ. ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos