ಬೆಂಗಳೂರು, ಜ. 30: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಲಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 11.45ರ ವಿಮಾನದಲ್ಲಿ ಬಿಎಸ್ವೈ ದೆಹಲಿಗೆ ಪ್ರಯಾಣಿಸಲಿದ್ದಾರೆ. ದೆಹಲಿಯಲ್ಲಿ ಹೈಮಾಂಡ್ ನಾಯಕರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಿದ್ದಾರೆ.
ಇಂದು ರಾತ್ರಿ 10 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೆ ಸಮಯ ನಿಗದಿಯಾಗಿದೆ. ಉಭಯ ನಾಯಕರ ಜೊತೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ.