ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಆತ್ಮಸಾಕ್ಷಿ ಮತಗಳು ಬೀಳಲಿವೆ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಆತ್ಮಸಾಕ್ಷಿ ಮತ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಆತ್ಮ ಸಾಕ್ಷಿ ಅಂದರೆ ಏನು. ಅವರ ಮತಗಳೆ ನಮ್ಮ ಪಕ್ಷ ಅಭ್ಯರ್ಥಿಗಳಿಗೆ ಬೀಳಲಿದೆ ಕುಮಾರಸ್ವಾಮಿಯವರಿಗೆ ಆತ್ಮಸಾಕ್ಷಿ ಇದೆಯೇ ಅವರಿಗೆ ಆತ್ಮವೇ ಇಲ್ಲ ಜಾತ್ಯಾತೀತ ಎಂದು ಹೇಳಿಕೊಂಡು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅವರೊಂದಿಗೆ ಓಡಾಡುತ್ತಿದ್ದಾರೆ ಇನ್ನು ಆತ್ಮಸಾಕ್ಷಿ ಎಲ್ಲಿಂದ ಬಂತು ಎಂದು ವ್ಯಂಗ್ಯ ಮಾಡಿದ್ದಾರೆ.