ಇಕ್ಕಟ್ಟಿನಲ್ಲಿ ಸಿಎಂ

ಇಕ್ಕಟ್ಟಿನಲ್ಲಿ ಸಿಎಂ

ಬೆಂಗಳೂರು, ಡಿ. 14: ಉಪ ಚುನಾವಣೆ ಫ‌ಲಿತಾಂಶದ ಬಳಿಕ ರಾಜ್ಯದಲ್ಲಿ ಗಟ್ಟಿಯಾಗಿ ನೆಲೆಯೂರಿರುವ ಬಿಜೆಪಿ ಸರಕಾರಕ್ಕೆ ಈಗ ಉಪ ಮುಖ್ಯಮಂತ್ರಿ ಹುದ್ದೆಯೇ ದೊಡ್ಡ ಸವಾಲಾಗಿದೆ. ಗುರುವಾರ ಸಂಪುಟ ಸಭೆಗೆ ಗೈರು ಹಾಜರಾಗಿದ್ದ ಶ್ರೀರಾಮುಲು, ಶುಕ್ರವಾರ ನಡೆದ ಹಿರಿಯ ಅಧಿಕಾರಿಗಳ ಮಟ್ಟದ ಸಭೆಯಲ್ಲೂ ಭಾಗವಹಿಸಿರಲಿಲ್ಲ. ಮೈತ್ರಿ ಸರಕಾರ ಪತನಗೊಳಿಸಿ ಬಿಜೆಪಿ ಸರಕಾರ ಬರಲು ಕಾರಣ ರಾಗಿ ರುವ ನೂತನ ಶಾಸಕರ ಬೇಡಿಕೆಗಳಿಗೆ ಮಾನ್ಯತೆ ನೀಡಿದರೆ, ವಲಸಿಗರ ಬೇಡಿಕೆ ಈಡೇರಿಸದಿದ್ದರೆ ಸರಕಾರಕ್ಕೆ ಕಂಟಕ. ಹೀಗಾಗಿ ಯಡಿಯೂರಪ್ಪ ಉಪ ಮುಖ್ಯಮಂತ್ರಿ ಎಂಬ ಪಟ್ಟದ ಇಕ್ಕಟ್ಟಿಕ್ಕೆ ಸಿಲುಕಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಸಾಧಿಸಿದ ವಲಸಿಗ ಶಾಸಕರನ್ನು ಸಚಿವರನ್ನಾಗಿ ಮಾಡುವ ಜತೆಗೆ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರಾದ ಎಚ್‌. ವಿಶ್ವನಾಥ್‌ ಹಾಗೂ ಎಂಟಿಬಿ ನಾಗರಾಜ್‌ ಅವರನ್ನು ಸಚಿವರನ್ನಾಗಿ ಮಾಡಬೇಕಿದೆ. ಆದರೆ ರಮೇಶ್‌ ಜಾರಕಿ ಹೊಳಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡ ಬೇಕೆಂಬ ವಲಸಿಗರ ಪಟ್ಟು ಮೂಲ ಬಿಜೆಪಿ ನಾಯಕ ಸಮುದಾಯದ ಹಿರಿಯ ನಾಯಕ ಬಿ. ಶ್ರೀರಾಮುಲು ಅವರ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos