ಬಿಜೆಪಿ ನಾಯಕರಿಗೆ ಸಿಎಂ ಖಡಕ್  ಎಚ್ಚರಿಗೆ

ಬಿಜೆಪಿ ನಾಯಕರಿಗೆ ಸಿಎಂ ಖಡಕ್  ಎಚ್ಚರಿಗೆ

ಬೆಂಗಳೂರು, ನ. 12: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಬಿಜೆಪಿ ಟಿಕೆಟ್ ಹಂಚಿಕೆ ಸಂಬಂಧ ಸಿಎಂ ಬಿಜೆಪಿ ನಾಯಕರಿಗೆ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ.

ಉಪಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಉಪಚುನಾವಣೆಗೆ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಲವು ನಾಯಕರು ಇದೀಗ ಬಿಜೆಪಿ ವಿರುದ್ಧ ಸಿಡಿದೇಳುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಕುರಿತಂತೆ ಯಾರೂ ಹೇಳಿಕೆ ನೀಡದಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅನರ್ಹ ಶಾಸಕರ ತೀರ್ಪಿನ ಬಳಿಕ ಟಿಕೆಟ್ ಹಂಚಿಕೆ ಬಗ್ಗೆ ನಿರ್ಧಾರ ಮಾಡೋಣ ಅಲ್ಲಿಯವರೆಗೆ ಯಾರೂ ಬಿಜೆಪಿ ಟಿಕೆಟ್ ಬಗ್ಗೆ ಮಾತನಾಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos