ರಾಮನಗರ, ಜುಲೈ 4 : ತವರು ಜಿಲ್ಲೆ ರಾಮನಗರದಲ್ಲೇ ಸಿಎಂ ಕುಮಾರಸ್ವಾಮಿ ಬಿಗ್ ಶಾಕ್ ದೊರೆತಿದೆ. ಎಂಪಿ ಅಶೋಕ್ ಕಳೆದ ಮೂರು ವರ್ಷಗಳಿಂದ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದರೂ ಸಕ್ರಿಯವಾಗಿ ಪಕ್ಷದಲ್ಲಿ ಕಾರ್ಯ ಮಾಡುತ್ತಿರಲಿಲ್ಲ, ಸಭೆ, ಸಮಾರಂಭಗಳಿಗೂ ಪಾಲ್ಗೊಳ್ಳುತ್ತಿರಲಿಲ್ಲ. ಸಿಎಂ ಹಾಗೂ ಅನಿತಾ ಕುಮಾರಸ್ವಾಮಿಯವರೂ ಇಬ್ಬರೂ ತಮ್ಮ ಸ್ವಂತ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ, ತಾವು ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರೂ ಕೂಡ ತಮಗೆ ಯಾವುದೇ ಮನ್ನಣೆ ನೀಡುತ್ತಿಲ್ಲ ಎನ್ನುವ ಆರೋಪವನ್ನು ಕಾರ್ಯಕರ್ತರು ಮಾಡಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂಪಿ ಅಶೋಕ್ ರಾಜೀನಾಮೆ ನೀಡಿದ್ದಾರೆ. ಮಾಗಡಿಯ ಮಾಜಿ ಶಾಸಕ ಬಾಲಕೃಷ್ಣ ಅವರೊಂದಿಗೆ ಗುರತಿಸಿಕೊಂಡಿದ್ದ ಎಂಪಿ ಅಶೋಕ್ ಈಗ ರಾಜೀನಾಮೆ ನೀಡಿದ್ದಾರೆ. ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಸಿಎಂ ಕುಮಾರಸ್ವಾಮಿ ಇಬ್ಬರಿಗೂ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅನಿತಾ ಕುಮಾರಸ್ವಾಮಿಯಾಗಲಿ ಅಥವಾ ಸಿಎಂ ಕುಮಾರಸ್ವಾಮಿಯಾಗಲಿ ಸ್ಥಳೀಯ ಕಾರ್ಯಕರ್ತರ ಬಗ್ಗೆ ಹೆಚ್ಚು ಗಮನ ಕೊಡುತ್ತಿರಲಿಲ್ಲ, ಅವರ ಸಲಹೆ ಸೂಚನೆಗಳಿಗೂ ಬೆಲೆ ಕೊಡುತ್ತಿರಲಿಲ್ಲ ಎನ್ನುವ ಅಸಮಾಧಾನವೂ ಕೂಡ ಇತ್ತು ಎನ್ನಲಾಗಿದೆ.