ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ಜೊತೆ ಸಿಎಂ ಸಭೆ

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ಜೊತೆ ಸಿಎಂ ಸಭೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ

ಉಲ್ಬಣಿಸುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ, ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲಿದ್ದಾರೆ.‌ ಈ ಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಅಧಿಕಾರಿಗಳು, ಜಲಮಂಡಳಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇಂದು ಬೆಂಗಳೂರು ನಗರ ಭಾಗಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ನೀರಿನ‌ ಸಮಸ್ಯೆ ಪರಿಹಾರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಖಾಸಗಿ ಟ್ಯಾಂಕರ್ ಮಾಲೀಕರ ಸುಲಿಗೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಮೊದಲ ಬಾರಿ ಸಿಎಂ ಸಭೆ ಬಳಿಕ ಸುಲಿಗೆಗೆ ಬ್ರೇಕ್ ಹಾಕಲಾಗಿತ್ತು. ಮಾ.7ರಂದು ಟ್ಯಾಂಕರ್ ನೀರಿನ ದರ ನಿಗದಿಪಡಿಸಿ ಆದೇಶ ಮಾಡಲಾಗಿತ್ತು. ಬೆಂಗಳೂರು ನಗರದಲ್ಲಿ ಸುಮಾರು 3,500 ಖಾಸಗಿ ಟ್ಯಾಂಕರ್‌ಗಳಿವೆ. ಖಾಸಗಿ ಟ್ಯಾಂಕರ್‌ಗಳ ಬಹುತೇಕ ಮಾಲೀಕರು ಪರವಾನಗಿ ಪಡೆದಿಲ್ಲ.

ಮಾ.1ರಿಂದ 7ರೊಳಗೆ ಸ್ವಯಂ ನೋಂದಣಿಗೆ ಸೂಚಿಸಲಾಗಿತ್ತು. ಇಂದಿನ ಸಭೆಯಲ್ಲಿ ಈ ಬಗ್ಗೆ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ಕಾವೇರಿ 5ನೇ ಹಂತದ ಮುಕ್ತಾಯ ಹಂತದ ಮಾಹಿತಿ ಸಂಗ್ರಹಿಸಲಿದ್ದಾರೆ. ನೀರಿನ ಸಮಸ್ಯೆ ಪರಿಹಾರ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos