ಬೆಂಗಳೂರು, ಆ. 27: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಜಯನಗರದ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸುತ್ತೂರು ಶ್ರೀಗಳು ಹಾಗೂ ಕೊಯಮತ್ತೂರಿನ ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸುತ್ತೂರು ಶ್ರೀಗಳು ಮುಖ್ಯಮಂತ್ರಿಗಳಿಗೆ ಮಠದ ವತಿಯಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆಯ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಸಚಿವರಾದ ಆರ್. ಅಶೋಕ್, ವಿ. ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಸಿ. ಪಾಟೀಲ, ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.