ಸಿಎಂ ಇಂದು ಶಾಸಕರು, ಸಂಸದರ ಜೊತೆ ಸಭೆ

ಸಿಎಂ ಇಂದು ಶಾಸಕರು, ಸಂಸದರ ಜೊತೆ ಸಭೆ

ಬಳ್ಳಾರಿ, ಅ. 2: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಳ್ಳಾರಿ ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಂಸದರ ಜೊತೆ ವಿಜಯನಗರ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ವಿಚಾರ ಸಂಬಂಧ ಸಭೆ ಕರೆದಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ ಸಭೆ ನಡೆಯಲಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಬಳ್ಳಾರಿ ಜಿಲ್ಲೆಯ ವಿಜಯನಗರವನ್ನು ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಪ್ರತ್ಯೇಕ ಜಿಲ್ಲೆಗೆ ವಿರೋಧ ವ್ಯಕ್ತವಾಗಿದ್ದು, ಬಳ್ಳಾರಿಯ ಕೆಲ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜಿಲ್ಲೆಯ ಎಲ್ಲಾ ಶಾಸಕರ ಜೊತೆ ಸಭೆ ನಡೆಸಿ, ವಿಜಯನಗರವನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವ ಬಗ್ಗೆ ಸಿಎಂ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos