ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್ ನಿಧನಕ್ಕೆ ಸಿಎಂ ಸಂತಾಪ

ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು, 4, ನ್ಯೂಸ್ಎಕ್ಸ್ ಪ್ರೆಸ್‍: ಕೇಂದ್ರದ ಮಾಜಿ ಸಚಿವ ವಿ.ಧನಂಜಯ್‍ ಕುಮಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಾಜಪೇಯಿ ಸರ್ಕಾರದಲ್ಲಿ ಎರಡು ಅವಧಿಯಲ್ಲಿ ವಿವಿಧ ಖಾತೆಗಳನ್ನು ನಿಭಾಯಿಸಿದ ಅನುಭವ ಅವರದಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos