ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೀಡಿರುವ ಶಕ್ತಿ ಯೋಜನೆ ನಿಲ್ಲುತ್ತದೆ ಎಂದು ರಾಜ್ಯ ರಾಜಕೀಯದಲ್ಲಿ ಇದೀಗ ಬಾರಿ ಚರ್ಚೆಯಾಗುತ್ತಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆಸಿದ್ದು ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಏನೇ ಕಷ್ಟ ಬಂದರೂ ಕೂಡ ನಮ್ಮ ಸರ್ಕಾರದ ಐದು ಗ್ಯಾರಂಟಿಗಳು ಮುಂದುವರೆದುಕೊಂಡು ಹೋಗುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಐದು ವರ್ಷ ಕೂಡ ನಮ್ಮ ಸರ್ಕಾರದ ಐದು ಗ್ಯಾರಂಟಿಗಳು ಮುಂದುವರಿಯುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.
ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.