ಬಿಜೆಪಿಗೆ ಟಾಂಗ್‌ ನೀಡಿದ : ಸಿಎಂ ಸಿದ್ದರಾಮಯ್ಯ

ಬಿಜೆಪಿಗೆ ಟಾಂಗ್‌ ನೀಡಿದ : ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಜ್ಯದೆಲ್ಲಡೆ ಅಭ್ಯರ್ಥಿಗಳ ಪರ ಪಕ್ಷದ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ಇಂದು ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ.  ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ನಂಬಿಸಿ ರೈತರ ಖರ್ಚು ಮೂರು ಪಟ್ಟು ಮಾಡಿದರು. ಇದು ದೇಶದ ಇಡಿ ದೇಶದ ರೈತ ಕುಲಕ್ಕೆ ಬಗೆದ ನಂಬಿಕೆ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆ ಸಂಪೂರ್ಣ ತಡೆಯುವುದಾಗಿ ನಂಬಿಸಿದರು. ಈಗ ಎಲ್ಲದರ ಬೆಲೆ ಆಕಾಶ ಮುಟ್ಟಿದೆ. ಇಂಥಾ ನಂಬಿಕೆ ದ್ರೋಹಗಳನ್ನು ಭಾರತೀಯರಿಗೆ ಬಗೆದಿದ್ದಾರಲ್ಲಾ ಇಂಥಾ ವ್ಯಕ್ತಿಯ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಘನತೆ ಬರುತ್ತದಾ ಎಂದು ಪ್ರಶ್ನಿಸಿದರು. ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯ್ತು. ದೇವೇಗೌಡರು ಮೋದಿಯವರ ಮಟ್ಟಕ್ಕೆ ಇಳಿದು ಸುಳ್ಳು ಹೇಳಿದ್ರಲ್ಲಾ ಅಂತ ನನಗೇ ನಾಚಿಕೆ ಆಯ್ತು.

ಮೋದಿಯವರು ರಾಜ್ಯದ ಜನತೆಗೆ ಕೊಟ್ಟ ಖಾಲಿ ಚೊಂಬನ್ನು ದೇವೇಗೌಡರು ಅಕ್ಷಯ ಪಾತ್ರೆ ಎಂದು ಸುಳ್ಳು ಹೇಳಿದ್ದಾರೆ. ಚೊಂಬು ಅಕ್ಷಯ ಪಾತ್ರೆ ಆಗಿದ್ದರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೊಡಲು ಏಕೆ ಸಾಧ್ಯವಾಗಲಿಲ್ಲ? ರೈತರ ಸಾಲ ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಜತೆಗೆ ಇಡೀ ದೇಶದ ರೈತರ ಸಾಲ ಸಂಪೂರ್ಣ ಮನ್ನಾ, ನಿರುದ್ಯೋಗಿ ಯುವಕರ ಖಾತೆಗೆ ಲಕ್ಷ ರೂಪಾಯಿ ಹಾಕುವ ಗ್ಯಾರಂಟಿಯನ್ನೂ ನಾವು ನೀಡಿದ್ದೇವೆ. ಹೀಗಾಗಿ ಖಾಲಿ ಚೊಂಬಿಗೆ ಮತ ಹಾಕಿ ಹಾಳು ಮಾಡಿಕೊಳ್ತೀರೋ, ನಿಮ್ಮ ಬದುಕಿಗೆ ಸ್ಪಂದಿಸಿ ನಿಮ್ಮ ಜೇಬಿಗೆ ಶಕ್ತಿ ತುಂಬುವ ಗ್ಯಾರಂಟಿ ಕಾಂಗ್ರೆಸ್ಸಿಗೆ ಮತ ಹಾಕ್ತೀರೋ ನಿರ್ಧರಿಸಿ ಎಂದು ಕರೆ ನೀಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos