ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತ: ಬಿಜೆಪಿಗೆ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ !

ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತ: ಬಿಜೆಪಿಗೆ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ !

ಬೆಂಗಳೂರು: ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು, ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಕಾರ್ಯ ನೀಡಿರುವುದು, ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ ಜನತಾ ಪಕ್ಷ ಗುಪ್ತ ಅಜೆಂಡವಾದ ಭಾಗವೇ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿಯನ್ನು ನಡೆಸಿದ್ದಾರೆ.

ಬಿಜೆಪಿಯವರು ಒಂದು ವೇಳೆ ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾಗಲೇ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಈ ಹಿಂದೆ ಕೂಡ ಸಂವಿಧಾನ ಬದಲಾವಣೆಗೆ ಸಂಬಂಧಿಸಿ ಅವರು ನೀಡಿದ್ದ ಹೇಳಿಕೆ, ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಇದೀಗ ಹೆಗಡೆ ಮತ್ತೆ ಅಂತದ್ದೇ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ, ಅನಂತಕುಮಾರ್ ಹೆಗಡೆ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಅದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.

ಫ್ರೆಶ್ ನ್ಯೂಸ್

Latest Posts

Featured Videos