7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಸಲ್ಲಿಸಿದ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ವರದಿ ಸ್ವೀಕರಿಸಲಾಗಿದ್ದು ವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸ್ಸು ಮಾಡಿದೆ ಆರ್ಥಿಕ ಇಲಾಖೆಯಿಂದ ವರದಿ ಪರಿಶೀಲಿಸಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ವರದಿ ಸ್ವೀಕಾರಕ್ಕೆ ಉಳಿದಿರುವುದು ಕೇವಲ 20 ಗಂಟೆಗಳು ಮಾತ್ರ.

ಇಂದು ಆಯೋಗದ ಅವಧಿ ಮುಗಿಯುತ್ತಿದೆ. ಇಂದು ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಲಿದೆ. ಅಲ್ಲಿ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಇಂದು ಮದ್ಯಾಹ್ನದೊಳಗೆ ರಾಜ್ಯ ಸರಕಾರ ಈ ವರದಿ ಸ್ವೀಕರಿಸಬೇಕು. ಇಲ್ಲವೇ ಆಯೋಗದ ಅವಧಿ ವಿಸ್ತರಿಸಬೇಕಿದೆ.

ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗ ಸರ್ಕಾರ ಯಾವುದೇ ಹೊಸ ಯೋಜನೆ ಅಥವಾ ನಿರ್ಧಾರ ಕೈಗೊಳ್ಳುವಂತಿಲ್ಲ. ಹೀಗಾಗಿ ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ತುದಿಗಾಲಿನಲ್ಲಿ ನಿಂತು ರಾಜ್ಯ ಸರಕಾರದ ನಿರ್ಧಾರವನ್ನು ಎದುರು ನೋಡುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos