CAA ಕಾಯ್ದೆ ಬಿಜೆಪಿಯರ ಚುನಾವಣಾ ಗಿಮಿಕ್: ಸಿಎಂ ಸಿದ್ದು

CAA ಕಾಯ್ದೆ ಬಿಜೆಪಿಯರ ಚುನಾವಣಾ ಗಿಮಿಕ್: ಸಿಎಂ ಸಿದ್ದು

ಉಡುಪಿ: ಚುನಾವಣೆ ಹತ್ತಿರ ಬರುತ್ತಿರುವಾಗ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳ ಅಧಿಸೂಚನೆಯನ್ನು ಹೊರಡಿಸಿರುವ ಕೇಂದ್ರ ಬಿಜೆಪಿ ಸರ್ಕಾರ ಸೋಲಿನ ಭೀತಿಯಿಂದ ಈ ಎಲ್ಲಾ ಗಿಮಿಕ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.  ಉಡುಪಿಯಲ್ಲಿ ನಡೆಯುತ್ತಿರುವ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ವೇಳೆ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ

ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಪಕ್ಷಕ್ಕೆ ಬಲ ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos