ಬೆಂಗಳೂರು: ತಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಂದು ಕಾಂಗ್ರೆಸ್ ನ ಕೆಲ ಶಾಸಕರು ನೀಡುತ್ತಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ,
“ನಾನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ತಯಾರಿದ್ದೇನೆ” ಎಂದು ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್ ಶಾಸಕರು ಗೆರೆ ದಾಟುತ್ತಿದ್ದು, ಕಾಂಗ್ರೆಸ್ ಅವರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು.
“ಈ ವಿಷಯಗಳನ್ನೆಲ್ಲಾ ಕಾಂಗ್ರೆಸ್ ನಾಯಕರು ಗಮನಿಸಬೇಕು. ಇವುಗಳನ್ನೆಲ್ಲಾ ಕಾಂಗ್ರೆಸ್ ನಾಯಕರು ನಿಯಂತ್ರಿಸಬೇಕು. ಮೈತ್ರಿಯ ಗೆರೆಯನ್ನು ಅವರು ದಾಟುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಮೇಲೆ ಪರಿಣಾಮ ಬೀರಲಿದೆ” ಎಂದವರು ಹೇಳಿದರು.