ಇಂದು ತುಮಕೂರಿನಲ್ಲಿ ಸಿಎಂ ಪ್ರಚಾರ

ಇಂದು ತುಮಕೂರಿನಲ್ಲಿ ಸಿಎಂ ಪ್ರಚಾರ

ತುಮಕೂರು: ಲೋಕಸಭಾ ಚುನಾವಣೆ ಹಿನ್ನೇನು ಕೆಲವು ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಸ್.ಪಿ.ಮುದ್ದಹನುಮೇಗೌಡ ಅವರು ಸ್ಪರ್ಧಿಸುತ್ತಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಸ್.ಪಿ.ಮುದ್ದಹನುಮೇಗೌಡ ಪರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ನಗರದ ಯಲ್ಲಾಪುರದಲ್ಲಿ ಸಂಜೆ 4.30 ಗಂಟೆಗೆ ನಡೆಯುವ ಸಭೆಯಲ್ಲಿ ಭಾಗವಹಿಸಿ ಪ್ರಚಾರ ಮಾಡಲಿದ್ದಾರೆ. ತುಮಕೂರು ನಗರ, ಗ್ರಾಮಾಂತರ, ಕೊರಟಗೆರೆ, ಮಧುಗಿರಿ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್‌ಗೌಡ, ಮುಖಂಡರಾದ ಆರ್.ರಾಮಕೃಷ್ಣ, ಷಫಿ ಅಹಮದ್, ರಫಿಕ್ ಅಹಮದ್, ಇಕ್ಬಾಲ್ ಅಹಮದ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos