ಬಾಂಬ್‌ ಸ್ಪೋಟ ಸ್ಥಳಕ್ಕೆ ಭೇಟಿ ನೀಡಿದ ಸಿಎಂ

ಬಾಂಬ್‌ ಸ್ಪೋಟ ಸ್ಥಳಕ್ಕೆ ಭೇಟಿ ನೀಡಿದ ಸಿಎಂ

ಬೆಂಗಳೂರು: ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿಬಿಳಿಸಿದೆ. ನೆನ್ನೆ ಆದಂತಹ ಬಾಂಬ್ ಸ್ಪೋಟಕ್ಕೆ ಸ್ಥಳದಲ್ಲಿ ಇದಂತಹ  9 ಜನ ಮಂದಿಗೆ ಗಾಯಗಳಾಗಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಸಿ ಎಂ ಸಿದ್ದರಾಮಯ್ಯ ಅವರು ಬಾಂಬ್ ಸ್ಪೋಟವಾದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಅವರು, ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ವೈದ್ಯರೊಂದಿಗೆ ಮಾತನಾಡಿ ಗಾಯಾಳುಗಳ ಚಿಕಿತ್ಸೆಯ ಮಾಹಿತಿ ಪಡೆದುಕೊಂಡರು.

ಫ್ರೆಶ್ ನ್ಯೂಸ್

Latest Posts

Featured Videos