ವಿಜಯಾನಂದ ಕಾಶಪ್ಪನವರ್ ಅವರಿಗೆ  ಸಿಎಂ ಶುಭ ಹಾರೈಸಿದರು

ವಿಜಯಾನಂದ ಕಾಶಪ್ಪನವರ್ ಅವರಿಗೆ  ಸಿಎಂ ಶುಭ ಹಾರೈಸಿದರು

ಬೆಂಗಳೂರು: ಇತ್ತೀಚಿಗಷ್ಟೇ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ಈ ಹಿಂದಿನ ನೇಮಕ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ.

ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ, ಮಾನ್ಯ ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ, ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ, ವಿಜಯಾನಂದ ಕಾಶಪ್ಪನವರ್‌ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಸಕ ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಶುಭ ಹಾರೈಸಿದರು. ಸಚಿವರಾದ ಜಮೀರ್ ಅಹಮದ್, ಬೈರತಿ ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos