ಎಳನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು

ಎಳನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು

ಬೆಂಗಳೂರು: ಬೇಸಿಗೆ ಆರಂಭವಾಗಿ, ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಏರುತ್ತಿರುವ ತಾಪಮಾನಕ್ಕೆ ಹೊಂದಿಕೊಳ್ಳಲು ದೇಹವು ಹೆಣಗಾಡುತ್ತಿದೆ. ಅದಕ್ಕಾಗಿ ದೇಹ ತಂಪಾಗಿಸುವ ಆಹಾರ ಸೇವನೆಗೆ ಹೆಚ್ಚು ಒತ್ತು ನೀಡಬೇಕು. ದೇಹವು ನಿರಂತರವಾಗಿ ಬೆವರುವ ಕಾರಣ ದೇಹದಲ್ಲಿ ನೀರಿನಾಂಶದ ಕೊರತೆ ಕಾಡಬಹುದು. ಅಂತಹ ಸಂದರ್ಭದಲ್ಲಿ ದೇಹವು ತಂಪು ಪಾನೀಯಗಳನ್ನು ಬಯಸುವುದು ಸಹಜ. ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೋಲ್ಡ್‌ ಡ್ರಿಂಕ್ಸ್‌ ಅಥವಾ ಐಸ್‌ಕ್ರೀಮ್‌ ಸೇವನೆಯ ಬದಲು ಎಳನೀರು ಸೇವಿಸುವುದನ್ನು ರೂಢಿಸಿಕೊಳ್ಳಬಹುದು.

ಎಳ ನೀರು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ವಿಟಮಿನ್ ಸಿ ನಂತಹ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಇವೆಲ್ಲವೂ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ, ಇದು ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ಕೊಬ್ಬನ್ನು ಸುಲಭವಾಗಿ ತೆಗೆದುಹಾಕುತ್ತದೆ.

ಎಳನೀರು ತುಂಬಾ ಪ್ರಯೋಜನಕಾರಿ ಮತ್ತು ಆರೋಗ್ಯಕರವಾಗಿದೆ. ಅದರಲ್ಲೂ ಬೇಸಿಗೆಯಲ್ಲಿ ಎಳನೀರು ಕುಡಿಯೋದರಿಂದ ದೇಹವನ್ನು ಹೈಡ್ರೇಟ್‌ ಆಗಿರಿಸಬಹುದು. ಇದು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ಇದನ್ನು ಕುಡಿದ ನಂತರ, ದೀರ್ಘಕಾಲದವರೆಗೆ ಹೊಟ್ಟೆಯು ತುಂಬಿರುತ್ತದೆ.

ತೂಕ ಇಳಿಸಲು ಪ್ರಯತ್ನ ಮಾಡುವವರು ಬೇಸಿಗೆ ಕಾಲದಲ್ಲಿ ಒಂದಿಷ್ಟು ಹೆಚ್ಚು ಶ್ರಮ ಹಾಕಿದರೆ ಖಚಿತ ಫಲಿತಾಂಶ ಖಂಡಿತ. ಯಾಕೆಂದರೆ ಈ ಸಮಯದಲ್ಲಿ ದೇಹದ ಚಯಾಪಚಯವು ಹೆಚ್ಚಿರುತ್ತದೆ. ಈ ಸಮಯದಲ್ಲಿ ಹಸಿವು ಕೂಡ ಕಡಿಮೆ ಇರುತ್ತದೆ. ಹಾಗಾಗಿ ಈ ಸಮಯದಲ್ಲಿ ನೀರಿನಾಂಶ ಹೆಚ್ಚಿರುವ ಹಣ್ಣು ತರಕಾರಿಗಳ ಸೇವನೆಗೆ ಹೆಚ್ಚು ಒತ್ತು ನೀಡುವ ಮೂಲಕ ದೇಹ ತೂಕ ಇಳಿಕೆಗೆ ಪ್ರಯತ್ನಿಸಬೇಕು.

 

ಫ್ರೆಶ್ ನ್ಯೂಸ್

Latest Posts

Featured Videos